July 21, 2026
Tuesday, July 21, 2026
spot_img

ಗಣಿ ಇಲಾಖೆಗೆ ಭರ್ಜರಿ ಶಾಕ್: ಏಕಕಾಲದಲ್ಲಿ 160 ಅಧಿಕಾರಿಗಳ ಎತ್ತಂಗಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ರಾಜ್ಯ ಸರ್ಕಾರ ಭಾರಿ ಆಡಳಿತಾತ್ಮಕ ಬದಲಾವಣೆ ಕೈಗೊಂಡಿದ್ದು, ಒಂದೇ ಹಂತದಲ್ಲಿ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗಳಿಗೆ ಈ ಕ್ರಮ ಅನ್ವಯವಾಗಿದೆ.

160 ಅಧಿಕಾರಿಗಳಿಗೆ ಸ್ಥಳಾಂತರ

ವರ್ಗಾವಣೆ ಪಟ್ಟಿಯಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು ಸೇರಿದ್ದಾರೆ. ಹೊಸ ನಿಯೋಜಿತ ಸ್ಥಳಕ್ಕೆ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ:

ಅಕ್ರಮ ತಡೆಗೆ ಕ್ರಮ

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವುದು, ಸ್ಥಳೀಯ ಪ್ರಭಾವ ಕಡಿಮೆ ಮಾಡುವುದು ಹಾಗೂ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಬಲಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಈ ಆಡಳಿತಾತ್ಮಕ ಬದಲಾವಣೆ ಜಾರಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !