ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್ಪ್ರೆಸ್ವೇನಲ್ಲಿ ಬೃಹತ್ ಗುಂಡಿಯೊಂದು ನಿರ್ಮಾಣವಾಗಿದೆ. ಸುಮಾರು 15 ಅಡಿಯಷ್ಟು ರಸ್ತೆ ಕುಸಿದು ಅಂಡರ್ಪಾಸ್ ಕಾಮಗಾರಿ ನಡೆಯುತ್ತಿರುವುದರಿಂದ ಅಧಿಕಾರಿಗಳು ತಕ್ಷಣ ಅಲ್ಲಿಗೆ ಆಗಮಿಸಿ ವಾಹನ ಸಂಚಾರಕ್ಕೆ ಬೇರೆ ಮಾರ್ಗ ಬದಲಾಯಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಅಂಡರ್ ಪಾಸ್ ನಿರ್ಮಾಣದ ಕಾರಣ ರಸ್ತೆ ಕುಸಿದಿದೆ ಅಂತಿದಾರೆ ಸ್ಥಳೀಯರು. ರಸ್ತೆ ನಿರ್ಮಾಣ ರೀತಿಯೂ ತೀವ್ರ ಟೀಕೆಗೆ ಗುರಿಯಾಗಿದೆ.
ಈ ರಸ್ತೆ ಕುಸಿದಿದ್ದರಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು. ಆ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Noida-Greater Noida expressway pic.twitter.com/vBqgTatHMu
— Piyush Rai (@Benarasiyaa) August 27, 2022