August 6, 2026
Thursday, August 6, 2026
spot_img

ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ: 10 ವರ್ಷದ ಬಾಲಕ ಸಾ*ವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಮರ ಕುಸಿದು ಭೀಕರ ದುರಂತ ಸಂಭವಿಸಿದೆ.

ಅಪಘಾತದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ಬಸ್ ಒಳಗೆ ಸಿಲುಕಿದ್ದು, ಆತನನ್ನು ಸುರಕ್ಷಿತವಾಗಿ ಹೊರತೆಗೆದಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕ್ಷಣಾರ್ಧದಲ್ಲಿ ನಡೆದ ದುರಂತ

ಚೆಂಬೂರ್‌ನ 11ನೇ ರಸ್ತೆಯಲ್ಲಿ ಸಾಗುತ್ತಿದ್ದ ಶಾಲಾ ಬಸ್ ಮೇಲೆ ಏಕಾಏಕಿ ಮರ ಉರುಳಿದೆ. ಮರದ ಭಾರದಿಂದ ಬಸ್‌ನ ಒಂದು ಭಾಗ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಮಕ್ಕಳು ತೀವ್ರ ಆತಂಕಕ್ಕೆ ಒಳಗಾದರು. ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದರು.

ಇದನ್ನೂ ಓದಿ:

ಗಾಯಾಳುಗಳಿಗೆ ತುರ್ತು ಚಿಕಿತ್ಸೆ

ಅಗ್ನಿಶಾಮಕ ದಳ, ಪೊಲೀಸರು ಹಾಗೂ ತುರ್ತು ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಗಾಯಾಳು ಮಕ್ಕಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದರು. ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ವಿಶೇಷ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲುಕಿದ್ದ ವಿದ್ಯಾರ್ಥಿಯನ್ನು ರಕ್ಷಿಸಲು ಯಂತ್ರೋಪಕರಣಗಳ ಸಹಾಯದಿಂದ ಕಾರ್ಯಾಚರಣೆ ಮುಂದುವರಿದಿದೆ.

ಸ್ಥಳೀಯರ ಆರೋಪಕ್ಕೆ ಬಲ

ಈ ಪ್ರದೇಶದಲ್ಲಿ ಅಪಾಯಕಾರಿಯಾಗಿ ನಿಂತಿದ್ದ ಮರಗಳನ್ನು ತೆರವುಗೊಳಿಸುವಂತೆ ಸ್ಥಳೀಯರು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಬಳಿಕ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಘಟನೆಯ ಕುರಿತು ಸಮಗ್ರ ತನಿಖೆಗೆ ಆದೇಶಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !