ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚೆಚ್ಚು ಸಮಸ್ಯೆಯಾಗಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ.
ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರವೇ ಆಗಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದಿಷ್ಟೇ ಅಲ್ಲ, ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.