ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಿಂದಾಗಿ, ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಟ್ರಿನಿಟಿ ನಿಲ್ದಾಣದಿಂದ ಮಹಾತ್ಮ ಗಾಂಧಿ ರಸ್ತೆಗೆ ತೆರಳುವ ಮಾರ್ಗದಲ್ಲಿ ಮರದ ಕೊಂಬೆಯೊಂದು ಮೆಟ್ರೋ ಹಳಿ ಮೇಲೆ ಬಿದ್ದ ಪರಿಣಾಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ, ಇಂದ್ರಾನಗರ ಮತ್ತು ವೈಟ್ ಫೀಲ್ಡ್ ಮತ್ತು ಎಂಜಿ ರಸ್ತೆಯಿಂದ ಚಲ್ಲಘಟ್ಟದ ನಡುವೆ ಮಾತ್ರ ರೈಲುಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅಡಚಣೆ ಉಂಟಾಗಿದೆ, ಹಳಿಗಳ ಮೇಲೆ ಬಿದ್ದಿರುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸುವ ಕೆಲಸ ಇನ್ನೂ ಮುಂದುವರೆದಿದೆ ಮತ್ತು ಶೀಘ್ರದಲ್ಲೇ ಸಂಚಾರ ಪುನರಾರಂಭವಾಗಲಿದೆ ಎಂದು ವರದಿ ಹೇಳಿದೆ.