ಕಾಂಗ್ರೆಸ್ ಗೆ ಭರ್ಜರಿ ಗೆಲುವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
ಕರ್ನಾಟಕ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ.
‘ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ನನ್ನ ಶುಭಾಶಯಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ’ ಎಂದು ಮತ್ತೊಂದು ಟ್ವೀಟ್​ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!