ಜಿಲ್ಲೆಯ ವಿದ್ಯಾರ್ಥಿ ವಸತಿನಿಲಯಗಳಿಗೆ ಮಾನವಹಕ್ಕು ಆಯೋಗ ಸದಸ್ಯರ ಭೇಟಿ: ಕಂಡಿದ್ದೇನು?

 

ಹೊಸ ದಿಗಂತ ವರದಿ, ಧಾರವಾಡ:

ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ವಿವಿಧ ವಿದ್ಯಾರ್ಥಿನಿಲಯಗಳು, ಬಂಧಿಖಾನೆ ಹಾಗೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಪರಿಶಿಷ್ಟ ಜಾತಿ, ಪಂಗಡಗಳ ಹಾಸ್ಟೇಲ್‍ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ್ದು, ಉತ್ತಮ ನಿರ್ವಹಣೆ ಕಂಡು ಬಂದಿದೆ ಎಂದರು.

ಹೆಚ್ಚಿನ ಕಟ್ಟಡಗಳ ಅವಶ್ಯಕತೆ ಇದ್ದು, ಅನುದಾನದ ಕೊರತೆ ಇರುವುದಾಗಿ ತಿಳಿದು ಬಂದಿತು. ಧಾರವಾಡ ಉತ್ತರ ಕರ್ನಾಟಕಕ್ಕೆ ವಿದ್ಯಾಕೇಂದ್ರ. ವಿದ್ಯಾರ್ಥಿಗಳಿಗೆ ಹೆಚ್ಚಿನ ವಸತಿ ಕಟ್ಟಡಗಳ ಅಗತ್ಯವಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!