ಮಾನವ ಕಳ್ಳಸಾಗಣೆ ಪ್ರಕರಣ: ಇಬ್ಬರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ ಎನ್‌ಐಎ

ಹೊಸದಿಗಂತ ವರದಿ,ಬೆಂಗಳೂರು:

ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ್ದು ಇದರಿಂದ ಒಟ್ಟು ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಪ್ರಕರಣದಲ್ಲಿ ಭಾರಿ ಶೋಧಕಾರ್ಯ ಕೈಗೊಂಡಿದ್ದ ಎನ್‌ಐಎ ತಂಡ ಪರಾರಿಯಾಗಿದ್ದ ಆರೋಪಿಗಳಾದ ಮೊಹಮ್ಮದ್ ಸಜ್ಜಿದ್ ಹಲ್ದಾರ್ ಮತ್ತು ಇದ್ರಿಸ್ ಅವರನ್ನು ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಪೊಲೀಸರ ನೆರವಿನೊಂದಿಗೆ ಗುರುವಾರ ರಾತ್ರಿ ಬಂಧಿಸಿದೆ.

2023ರ ನವೆಂಬರ್‌ನಲ್ಲಿ ಎನ್‌ಐಎ ತನಿಖೆಯ ಸಮಯದಲ್ಲಿ ಆರೋಪಿಗಳಿಬ್ಬರು ಭಾರತ-ಬಾಂಗ್ಲಾದೇಶ ಗಡಿಯಲ್ಲಿನ ಬೆನಾಪೋಲ್

ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿತ್ತು. ಬೆಂಗಳೂರಿನ ರಾಮಮೂರ್ತಿ ನಗರದ ಕೆ. ಚನ್ನಸಂದ್ರದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಬೇರ್ಪಡಿಸುವ ಘಟಕವನ್ನು ಸ್ಥಾಪಿಸಿದ್ದ ಆರೋಪಿ ಹಲ್ದಾ‌ರ್, ಇತರೆ ಬಾಂಗ್ಲಾದೇಶಿ ಪ್ರಜೆಗಳನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಬೆಂಗಳೂರಿನ ಅನದಪುರದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಬೇರ್ಪಡಿಸುವ ಘಟಕ ಸ್ಥಾಪಿಸಿದ್ದ ಇದ್ರಿಸ್ ಬಾಂಗ್ಲಾದೇಶದಿಂದ ಅಕ್ರಮವಾಗಿ ಕರೆತಂದಿದ್ದ 20ಕ್ಕೂ ಹೆಚ್ಚು ಕುಟುಂಬಗಳಿಗೆ ಭೂಮಿಯನ್ನ ಗುತ್ತಿಗೆಗೆ ಮತ್ತು ಟೆಂಟ್‌ಗಳನ್ನು ಸ್ಥಾಪಿಸಲು ನೀಡಿದ್ದ ಎಂಬುದು ಬಯಲಾಗಿತ್ತು.

ಕರ್ನಾಟಕ ಮೂಲದ ಕೆಲವು ವ್ಯಕ್ತಿಗಳು ಅಸ್ಸಾಂ, ತ್ರಿಪುರಾ ಮತ್ತು ಗಡಿಯಾಚೆಗಿನ ದೇಶಗಳಲ್ಲಿನ ಕಳ್ಳಸಾಗಾಣಿಕೆದಾರರೊಂದಿಗೆ ಸಂಪರ್ಕ ಹೊಂದಿರುವ ಬಗ್ಗೆ ಖಚಿತ ಮಾಹಿತ ಪಡೆದಿದ್ದ ಎನ್‌ಐಎ ಅಧಿಕಾರಿಗಳು 2023ರ ನ.7ರಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಭಾರತ-ಬಾಂಗ್ಲಾದೇಶದ ಗಡಿಯ ಮೂಲಕ ಭಾರತಕ್ಕೆ ಮಾನವ ಕಳ್ಳಸಾಗಣೆ ಮಾಡುವ ಹಾಗೂ ನಕಲಿ ಆಧಾ‌ರ್ ಕಾರ್ಡ್ ಸೃಷ್ಟಿಸಿ ಕೊಡುವ ಕಳ್ಳಸಾಗಣೆದಾರರ ದೊಡ್ಡ ಜಾಲವನ್ನು ಎನ್‌ಐಎ ತನಿಖೆಯಲ್ಲಿ ಬಹಿರಂಗಪಡಿಸಿತು. ಇದರ ಸಂಬಂಧ ಒಟ್ಟು 12 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದ ಎನ್‌ಐಎ ಅಧಿಕಾರಿಗಳು ಐಪಿಸಿ ಹಾಗೂ ಯುಎಪಿಎ 1967ರ ಪ್ರಕರಣಗಳ ಅಡಿಯಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ಹಾಗೂ ಬಾಂಗ್ಲಾದೇಶದ ಗಡಿಯಲ್ಲಿ ಸಕ್ರಿಯವಾಗಿರುವ ಕಳ್ಳಸಾಗಣೆದಾರರ ವಿರುದ್ಧ ಕಠಿಣ ಕ್ರಮವನ್ನು ಮುಂದುವರೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here