ಹಿಂದೂಗಳ ಅವಮಾನ, ಕಡೆಗಣನೆ ಕಾಂಗ್ರೆಸ್‌ ಕಾರ್ಯಸೂಚಿ: ನಳಿನ್‍ ಕುಮಾರ್ ಕಟೀಲ್ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಈ ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ತನ್ನ ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಅವರು ಕಿಡಿಕಾರಿದ್ದಾರೆ.
ಹಿಂದೂ ಎಂಬುದು ಭಾರತದ ಜೀವನ ಪದ್ಧತಿ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಸತೀಶ್ ಜಾರಕಿಹೊಳಿ ಅವರು ಹಾಗಿದ್ದರೆ ಸುಪ್ರೀಂ ಕೋರ್ಟಿಗಿಂತ ದೊಡ್ಡವರೇ ಎಂದು ಕಟೀಲ್ ಪ್ರಶ್ನಿಸಿದ್ದಾರೆ. ಬಾಬಾಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಿಂದೂ ಧರ್ಮದ ಬಗ್ಗೆ ಇದೊಂದು ಜೀವನ ಪದ್ಧತಿ ಎಂದು ಹಲವೆಡೆ ಉಲ್ಲೇಖಿಸಿದ್ದಾರೆ. ಹಿಂದೂಗಳು ಒಗ್ಗಟ್ಟಾಗಬೇಕೆಂದು ಅವರು ತಿಳಿಸಿದ್ದರು. ಆ ಮೂಲಕ ರಾಷ್ಟ್ರ ರಕ್ಷಣೆ ಆಗಲಿದೆ ಎಂದು ತಿಳಿಸಿದ್ದರು ಎಂದು ಹೇಳಿದ್ದಾರೆ.
ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!