ಕಾಂಗ್ರೆಸ್ ನ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಫೈನಲ್​: ಶೀಘ್ರ ಬಿಡುಗಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭೆ ಚುನಾವಣೆಗೆ 100ಕ್ಕೂ ಹೆಚ್ಚು ಸ್ಥಾನಗಳಿಗೆ ಪಕ್ಷದಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಮೊದಲ ಪಟ್ಟಿ ಹೊರಬೀಳಲಿದೆ. ಎಲ್ಲ ಹಾಲಿ ಶಾಸಕರು ಪುನರಾವರ್ತನೆಯಾಗುವುದಿಲ್ಲ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೆಲವು ಶಾಸಕರನ್ನು ಕೈಬಿಡಲಿದೆ ಎಂದು ಕಾಂಗ್ರೆಸ್​ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಕಾಂಗ್ರೆಸ್​​ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ಈ ಚುನಾವಣೆಯಲ್ಲಿ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಒಬ್ಬರೇ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದ್ದೇವೆ. ನಾವು ಸ್ವತಂತ್ರವಾಗಿ ಹೋರಾಡುತ್ತಿದ್ದೇವೆ. ನಾವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾರ್ಚ್​​ 20 ರಂದು ಬೆಳಗಾವಿಗೆ ರಾಹುಲ್​
ಮಾರ್ಚ್​ 20 ರಂದು ರಾಹುಲ್​ ಗಾಂಧಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬೆಳ ಗಾವಿಗೆ ಬರುತ್ತಿದ್ದಾರೆ. ಅಷ್ಟೇ ಅಲ್ಲ ಭಾರತ್ ಜೋಡೋ ಯಾತ್ರೆ ಬಳಿಕ ಮೊದಲ ರಾಜಕೀಯ ಭಾಷಣದಲ್ಲಿ ಅವರು ಭಾಗವಹಿಸುತ್ತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!