ರಾಜ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬೇಟೆ: 45 ಸ್ಥಳಗಳ ಮೇಲೆ ದಾಳಿ, 13 ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ 14 ಅಧಿಕಾರಿಗಳಿಗೆ ಸೇರಿದ 45 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದುವರೆಗೆ 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಲೋಕಾಯುಕ್ತ ಕಚೇರಿಯ ಪ್ರಕಟಣೆ ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ನಿರೀಕ್ಷಕ ಎಸ್.ನಟರಾಜ್, ತಹಶೀಲ್ದಾರ್ ಶಿವರಾಜು, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ, ತುಮಕೂರು ಜಿಲ್ಲಾ ಪಂಚಾಯಿತಿ ಕುಂದುಕೊರತೆ ನಿವಾರಣಾ ವೇದಿಕೆ ಮುಖ್ಯಸ್ಥ ಭುವನಹಳ್ಳಿ ನಾಗರಾಜ್, ಬಿಬಿಎಂಪಿ ಕೆರೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಸ್.ಭಾರತಿ, ಚಿತ್ರದುರ್ಗದ ಸಹಾಯಕ ಎಂಜಿನಿಯರ್ ಕೆ.ಮಹೇಶ್, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ಕೆ.ಎನ್.ನಾಗರಾಜು, ಮಡಿಕೇರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ನೀರಾವರಿ ಇಲಾಖೆ ಕೊಡಗು ಅಧೀಕ್ಷಕ ಎಂಜಿನಿಯರ್ ಕೆ.ಕೆ.ರಘುಪತಿ ಸೇರಿದಂತೆ 14 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಆರ್ಎಫ್ಒ ಎಸ್.ಸತೀಶ್, ಕೊಪ್ಪಳ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಮಂಜುನಾಥ, ಬೀದರ್ ಪೊಲೀಸ್ ಪೇದೆ ವಿಜಯಕುಮಾರ್, ಬೆಳಗಾವಿ ಮಹಾನಗರ ಪಾಲಿಕೆ ಆರ್ಐ ಸಂತೋಷ ಶರಣಪ್ಪ ಅನ್ನಿಶೆಟ್ಟಿ, ಧಾರವಾಡ ಪೊಲೀಸ್ ಪೇದೆ ಶಿವಾನಂದ ಮಾನಕರ ಅವರ ಮೇಲೂ ದಾಳಿ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!