Saturday, August 13, 2022

Latest Posts

ನ್ಯೂಯಾರ್ಕ್​ನಲ್ಲಿ ಇಡಾ ಚಂಡಮಾರುತ ಅಬ್ಬರ: ತುರ್ತು ಪರಿಸ್ಥಿತಿ ಘೋಷಣೆ, 9 ಜನರ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..

ಹೊಸದಿಗಂತ ವರದಿ,ಮೈಸೂರು:

ನ್ಯೂಯಾರ್ಕ್​ನಲ್ಲಿ ಇಡಾ ಚಂಡಮಾರುತದಿಂದ ಭಾರೀ ಪ್ರವಾಹ ಸೃಷ್ಟಿಯಾಗಿದೆ. ಬುಧವಾರ ರಾತ್ರಿ ನ್ಯೂಜೆರ್ಸಿ ಮತ್ತು ನ್ಯೂಯಾರ್ಕ್​ ನಗರಗಳು ಬಹುತೇಕ ಮುಳುಗಡೆಯಾಗುವಂತೆ ಪ್ರವಾಹದ ನೀರು ಎಲ್ಲೆಡೆ ತುಂಬಿಕೊಂಡಿತ್ತು. ಇನ್ನೂ ಪ್ರವಾಹದ ಅಬ್ಬರ ಕಡಿಮೆಯಾಗಿಲ್ಲ.
ನ್ಯೂಯಾರ್ಕ್​ನಲ್ಲಿ ಪ್ರವಾಹದಿಂದ 9 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಅನೇಕ ಪ್ರದೇಶಗಳು ಮುಳುಗಡೆಯಾಗಿರುವುದರಿಂದ ನ್ಯೂಯಾರ್ಕ್​ನಲ್ಲಿ ಇಂದು ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ನ್ಯೂಯಾರ್ಕ್ ತತ್ತರಿಸಿ ಹೋಗಿದೆ. ಈ ಬಗ್ಗೆ ಮಾತನಾಡಿರುವ ಲೂಸಿಯಾನದ ಮೇಯರ್ ಬಿಲ್ ಡಿ. ಬ್ಲಿಸಿಯೊ, ಇದೊಂದು ಐತಿಹಾಸಿಕ ಹವಾಮಾನ ದುರಂತ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ನ್ಯೂಯಾರ್ಕ್​ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಸಬ್‌ವೇ ರೈಲು ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇಡಾ ಚಂಡಮಾರುತ ಪರಿಣಾಮವಾಗಿ ಅಮೆರಿಕದ ಈಶಾನ್ಯ ಭಾಗದಲ್ಲಿ ಭಾರೀ ಮಳೆ ಆರಂಭವಾಗಿದ್ದು, ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪ್ರವಾಹದಿಂದಾಗಿ ನ್ಯೂಯಾರ್ಕ್ ನಗರದ ಸುರಂಗ ಮಾರ್ಗವನ್ನು ಮುಚ್ಚಲಾಗಿದೆ. ಅಲ್ಲದೆ, ನ್ಯೂಜೆರ್ಸಿಯ ನೆವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ನ್ಯೂಯಾರ್ಕ್​ನಲ್ಲಿ 9 ಜನರು ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹವಾಮಾನ ಇಲಾಖೆಯು ನ್ಯೂಯಾರ್ಕ್, ಬ್ರೂಕ್ಲಿನ್ ಮತ್ತು ಕ್ವೀನ್ಸ್ ನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದ್ದು, ಸ್ಟೇಟನ್ ಐರ್ಲೆಂಡ್​ನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ನ್ಯೂಯಾರ್ಕ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣದ ಒಳಗೂ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss