ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಸೋಮವಾರ ಸಂಜೆ ವೇಳೆಗೆ ಗುಜರಾತ್ ಕರಾವಳಿ ಪ್ರದೇಶದಲ್ಲಿ ತೌಕ್ತೆ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಗುಜರಾತ್ನ ಕರಾವಳಿ ಪ್ರದೇಶಗಳಲ್ಲಿ ವಾಸವಾಗಿರುವ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾನುವಾರ ತಡರಾತ್ರಿಯಿಂದ ಸೋಮವಾರ ಬೆಳಿಗ್ಗೆವರೆಗೂ ಜನರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಸಲಾಗಿದೆ.
ತೌಕ್ತೆ ಚಂಡಮಾರುತದಿಂದಾಗಿ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೂ ಗುಜರಾತ್ನ 21 ಜಿಲ್ಲೆಗಳಲ್ಲಿ ಮಳೆ ದಾಖಲಾಗಿದೆ. ಸೋಮವಾರ ಸಂಜೆ ವೇಳೆಗೆ ತೌಕ್ತೆ ಚಂಡಮಾರುತ ತೀವ್ರಗೊಳ್ಳಲಿದ್ದು ರಾತ್ರಿ 8 ರಿಂದ 11ರ ನಡುವೆ ರಾಜ್ಯ ಕರಾವಳಿಯನ್ನು ದಾಟಲಿದೆ. ಪೋರ್ ಬಂದರ್ ಹಾಗೂ ಭಾವನಗರ ಜಿಲ್ಲೆಯ ಮಹುವಾ ನಡುವೆ ರಾತ್ರಿ ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಸಂಜೆ ಸೌರಾಷ್ಟ್ರ ಹಾಗೂ ಗುಜರಾತ್ನ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ರವಾನಿಸಿದೆ. ಹೀಗಾಗಿ ಜನರನ್ನು ಸ್ಥಳಾಂತರ ಮಾಡಲಾಗಿದೆ.