Thursday, August 18, 2022

Latest Posts

ತೌಕ್ತೆ ತಾಂಡವಕ್ಕೆ ನಲುಗಿದ ಕರ್ನಾಟಕ: ಜಡಿಮಳೆಗೆ ಕರಾವಳಿ ಹೈರಾಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಕರ್ನಾಟಕ ಕರಾವಳಿ ಅಕ್ಷರಶಃ ನಡುಗಿಹೋಗಿದೆ. ಇಂದು ಎಲ್ಲೆಡೆ ವ್ಯಪಕ ಮಳೆಯಾಗುತ್ತಿದ್ದು, ಕಡಲು ಹುಚ್ಚೆದ್ದು ಕುಣಿಯುತ್ತಿದೆ. ಮೇ 16 ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಹೀಗಿದೆ:

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾಸರಗೋಡು, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬೀದರ್, ಗುಲ್ಬರ್ಗ, ರಾಯಚೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಪಾವಗಢ ಸೇರಿದಂತೆ ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತವು ಇವತ್ತು ರಾತ್ರಿ ಕರ್ನಾಟಕದ ಕರಾವಳಿಯಿಂದ ಮತ್ತಷ್ಟು ಬಲಗೊಂಡು ಮಹಾರಾಷ್ಟ್ರ ಕರಾವಳಿಗೆ ದಾಟುವ ನಿರೀಕ್ಷೆ ಇದೆ.

ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!