ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಗೃಹಬಂಧನದಲ್ಲಿ ಇರಿಸಲಾಗಿದೆ .
ಶ್ರೀನಗರದ ನೈಜೀನ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಗೃಹ ಬಂಧನದಲ್ಲಿ ಇರಿಸಲಾಗಿದ್ದು, ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸಲು ಸಹ ಅವಕಾಶ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುರಿಯತ್ ಮುಖ್ಯಸ್ಥರು ನೌಹಟ್ಟಾ ಪ್ರದೇಶದ ಜಾಮಿಯಾ ಮಸೀದಿಗೆ ಭೇಟಿ ನೀಡಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಬೇಕಿತ್ತು. ಆದರೆ ಶುಕ್ರವಾರದ ಪ್ರಾರ್ಥನೆಗೂ ಅವಕಾಶ ನೀಡಿಲ್ಲ.
ಈ ವಾರದ ಆರಂಭದಲ್ಲಿ, ಕೇಂದ್ರ ಸರ್ಕಾರವು ಮಿರ್ವೈಜ್ ನೇತೃತ್ವದ ಅವಾಮಿ ಕ್ರಿಯಾ ಸಮಿತಿ(ಎಎಸಿ) ಮತ್ತು ಶಿಯಾ ನಾಯಕ ಮಸ್ರೂರ್ ಅಬ್ಬಾಸ್ ಅನ್ಸಾರಿ ನೇತೃತ್ವದ ಜಮ್ಮು ಕಾಶ್ಮೀರ ಇತ್ತಿಹಾದುಲ್ ಮುಸ್ಲಿಮೀನ್(ಜೆಕೆಐಎಂ) ಅನ್ನು ದೇಶ ವಿರೋಧಿ ಚಟುವಟಿಕೆ, ಭಯೋತ್ಪಾದನೆ ಬೆಂಬಲಿಸುವುದು ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿವೆ ಎಂಬ ಆರೋಪಿಸಿ ಐದು ವರ್ಷಗಳ ಕಾಲ ನಿಷೇಧಿಸಿದೆ.