ಏಳು ತಿಂಗಳ ಗರ್ಭಿಣಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ, ಅತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಳು ತಿಂಗಳ ಗರ್ಭಿಣಿ ಮೇಲೆ ಆಕೆಯ ಪತಿ ಹಾಗೂ ಅತ್ತೆಯು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾರೆ.

ದೆಹಲಿಯ ಬವಾನ ಪ್ರದೇಶದಲ್ಲಿ ಮಹಿಳೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವರದಕ್ಷಿಣೆಗಾಗಿ ಇಂತಹ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ಪತಿ ಹಾಗೂ ಆತನ ಸಂಬಂಧಿಕರು ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ಕುರಿತು ದೆಹಲಿ ಪೊಲೀಸರಿಗೆ ನೋಟಿಸ್‌ ನೀಡಲಾಗಿದೆ. ಹಾಗೆಯೇ, ಸಂತ್ರಸ್ತೆಗೆ ಸಕಲ ರೀತಿಯ ನೆರವು ನೀಡಲಾಗುತ್ತಿದೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!