ಸಾಂಬಾರ್‌ ವಿಚಾರಕ್ಕೆ ಗಂಡ-ಹೆಂಡತಿ ಮಧ್ಯೆ ಜಗಳ: ಆತ್ಮಹತ್ಯೆಗೆ ಶರಣಾದ ಪತ್ನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಗರತ್ನ (38) ಮೃತಪಟ್ಟ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ ಮೃತಳ ಅಣ್ಣ ಮತ್ತು ತಾಯಿ ಆರೋಪಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಗಂಡ ಮತ್ತು ಮಕ್ಕಳು ಹೇಳುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!