Saturday, August 13, 2022

Latest Posts

ಗ್ರಾಪಂ ಸದಸ್ಯೆಯನ್ನು ಬರ್ಬರವಾಗಿ ಹತ್ಯೆಗೈದ ಪತಿ; ವಾಮಾಚಾರ ಶಂಕೆ

ಹೊಸದಿಗಂತ ವರದಿ, ಮುಂಡಗೋಡ:
ಪಾಳಾ ಗ್ರಾಮ ಪಂಚಾಯತ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿ ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆಕೆಯ ಗಂಡನೇ ಕೊಲೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ.
ಮೃತ ಸದಸ್ಯೆಯು ಕಾಂಗ್ರೆಸ್ ಬೆಂಬಲಿತ ಸದಸ್ಯೆಯಾಗಿದ್ದಾಳೆ. ಮನೆಯಲ್ಲಿ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮಧ್ಯರಾತ್ರಿ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ ಮಬನೂರ ಭೇಟಿ ನೀಡಿದ್ದಾರೆ.
ಮೃತದೇಹದ ಸುತ್ತಲೂ ಕುಂಕುಮ ಚೆಲ್ಲಲಾಗಿದ್ದು, ಮನೆಯ ಒಳಗೆ ಹಾಗೂ ಹೊರಗೆ ಚುನಾವಣಾ ಕರಪತ್ರಗಳನ್ನು ಇಟ್ಟು ಅವುಗಳ ಮೇಲೆ ಹುಲ್ಲು, ಕುಂಕುಮ ಇಡಲಾಗಿದೆ. ವಾಮಾಚಾರಕ್ಕಾಗಿ ನಡೆದ ಕೊಲೆಯೋ ಅಥವಾ ಇನ್ಯಾವುದೋ ಕಾರಣಕ್ಕೆ ನಡೆದ ಕೊಲೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಸ್ಥಳಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss