October 9, 2026
Friday, October 9, 2026
spot_img

ಕ್ಷುಲ್ಲಕ ಕಾರಣದಿಂದ ಪತ್ನಿಯ ತಲೆಗೆ ಹೆಲ್ಮೆಟ್‌ನಲ್ಲಿ ಹೊಡೆದು ಕೊಂದ ಪತಿ!

ಹೊಸದಿಗಂತ ವರದಿ ಹುಬ್ಬಳ್ಳಿ:

ಕ್ಷುಲ್ಲಕ ಕಾರಣಕ್ಕೆ ಹೆಲ್ಮೆಟ್‌ನಿಂದ ಪತಿಯೊಬ್ಬ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ನಾಗರತ್ನ ಹಳೆಮನಿ(19) ಕೊಲೆಯಾದ ಮಹಿಳೆ. ಪತಿ ಶಿವರಾಜ ಎಂಬಾತ ಕೊಲೆ ಮಾಡಿದ್ದಾನೆ. ತಾರಿಹಾಳದ ಶಿವರಾಜ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಅವರನ್ನು ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದ.

ಗುರುವಾರ ಬೆಳಿಗ್ಗೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಅದು ವಿಕೋಪಕ್ಕೆ ಹೋಗಿ ಆತ ಹಲ್ಮೆಟ್‌ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪತ್ನಿ ಕೆಳಗೆ ಬಿದ್ದು, ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Must Read