ದಿಗಂತ ವರದಿ ವಿಜಯಪುರ:
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ತನ್ನ ಮೂವರು ಮಕ್ಕಳಿಗೆ ವಿಷ ಹಾಕಿ, ತಾನೂ ವಿಷ ಸೇವಿಸಿ, ಪತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಇಬ್ಬರು ಮಕ್ಕಳು ಸಾವಿಗೀಡಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶಾಂತಾ, ರಾಯಣ್ಣ ಮೃತಪಟ್ಟ ಮಕ್ಕಳು. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿ ಮಸಬಿನಾಳ ಗ್ರಾಮದ ನಿವಾಸಿ ಬೀರಣ್ಣ ಮಸಬಿನಾಳ ತನ್ನ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಕಳಿಗೆ ವಿಷ ಹಾಕಿದ್ದಾನೆ. ಬೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇನ್ನು ಶಾಂತಾ ಹಾಗೂ ರಾಯಣ್ಣ ಇಬ್ಬರು ಚಿಕಿತ್ಸೆ ಫಲಿಸದೇ ನಗರದ ಜಿಲ್ಲಾಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.