SHOCKING | ಮಲಗುವ ಕೋಣೆ ಬೆಡ್ ಕೆಳಗೆ ಪತಿ, ತುಂಬು ಗರ್ಭಿಣಿ ಪತ್ನಿ ಶವವಾಗಿ ಪತ್ತೆ

ಹೊಸದಿಗಂತ ವರದಿ ಬಂಟ್ವಾಳ:

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿಯಲ್ಲಿ ಗಂಡ-ಹೆಂಡತಿಯ ಮೃತದೇಹ ನಿಗೂಢ ರೀತಿಯಲ್ಲಿ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾಗಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಮೃತಪಟ್ಟವರು. ತಿಮ್ಮಪ್ಪ ಮೂಲ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ಕುತ್ತಿಗೆ ಭಾಗದಲ್ಲಿ ಗಾಯಗಳು ಕಂಡು ಬಂದಿದೆ ಎಂದು ಹೇಳಲಾಗಿದೆ.

ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ‌. ಇವರಿಗೆ ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿಲ್ಲ. ಪ್ರಸ್ತುತ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತದ ದಿನಾಂಕವೂ ನಿಗದಿಯಾಗಿದೆಯೆನ್ನಲಾಗಿದೆ.

ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!