ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು 10ಕ್ಕೂ ಹೆಚ್ಚು ಬಾರಿ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಕೀರ್ತಿ (26) ಎಂದು ಗುರುತಿಸಲಾಗಿದೆ. ಇನ್ನು ಪತಿ ಅವಿನಾಶ್ (32) ಎನ್ನುವಾತ ಚಾಕುವಿನಿಂದ ಬರೋಬ್ಬರಿ ಹತ್ತು ಬಾರಿ ಚುಚ್ಚಿ ಕೊಂದು ಎಸ್ಕೇಪ್ ಆಗಿದ್ದಾನೆ.
ಕೀರ್ತಿ ಪೋಷಕರ ವಿರೋಧದ ನಡುವೆಯೂನಾಲ್ಕು ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಇಬ್ಬರು ನಡುವೆ ಶುರುವಾದ ಸಣ್ಣ ಜಗಳದಲ್ಲಿ ಅವಿನಾಶ್, ಪ್ರೀತಿ ನಂಬಿ ಬಂದಿದ್ದ ಕೀರ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ನಾಲ್ಕು ವರ್ಷದ ಹಿಂದೆಷ್ಟೇ ಮದುವೆಯಾಗಿದ್ದು, ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಸಹ ಮಗುವಿದೆ. ಅಲ್ಲದೇ ಕಳೆದ ವಾರ ಇಬ್ಬರೂ ಸಂಬಂಧಿಕರ ಮದುವೆಯಲ್ಲಿ ಖುಷಿ ಖುಷಿಯಲ್ಲಿ ಪಾಲ್ಗೊಂಡಿದ್ದರು. ಆದ್ರೆ, ಅದೋನಾಯ್ತೋ ಏನೋ ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಅವಿನಾಶ್, ಪತ್ನಿ ಕೀರ್ತಿಗೆ ಚಾಕುವಿನಿಂದ ಮನಸ್ಸೋ ಇಚ್ಛೇ ದಾಳಿ ಮಾಡಿ ಕೊಲೆ ಮಾಡಿದ್ದಾನೆ.