ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗಳಿಗೆ ಮದುವೆ ಮಾಡುವುದು ಬೇಡ ಎಂಬ ಕಾರಣಕ್ಕೆ ಪತಿ ಪತ್ನಿಯರ ನಡುವೆ ಜಗಳ ನಡೆದು ಪತಿಯೇ ಪತ್ನಿಯ ಕಾಲು ಮುರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.
ನನ್ನ ಮಗಳಿಗೆ ಕೇವಲ 13 ವರ್ಷ. ಈಗಲೇ ಮದುವೆ ಬೇಡ. ಮಗಳನ್ನ ಚೆನ್ನಾಗಿ ಓದಿಸೋಣ ಎಂದು ಸಲಹೆ ನೀಡಿದ ಪತ್ನಿ ಮಾಯವ್ವಾಳ ಮೇಲೆ ಗಂಡ ಬೀರಪ್ಪ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಸದ್ಯ ಮಾಯವ್ವಾ ಬೈಲಹೊಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.
ಹಾರುಗೊಪ್ಪ ಗ್ರಾಮದ ಬೀರಪ್ಪ ತಮ್ಮ ಮಗಳಿಗೆ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದರು. ಆದರೆ ಇದಕ್ಕೆ ಪತ್ನಿ ಮಾಯವ್ವಾ ನಿರಾಕರಿಸಿದಾಗ ಹಲ್ಲೆ ನಡೆದಿದೆ. ದೂರು ನೀಡಿದರೂ ಪೊಲೀಸರು ಬಂಧಿಸಿಲ್ಲ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುರಗೋಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.