July 13, 2026
Monday, July 13, 2026
spot_img

ನಾವು ಮಾಡಿದ ಸಾಲ ತೀರಿಸು ಎಂದು ಪೀಡಿಸಿದ ಗಂಡನ ಮನೆಯವರು! ಬೇಸರದಲ್ಲಿ ಮಗು ಜತೆ ಸಾವಿಗೆ ಶರಣಾದ ಯುವತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಲ ತೀರಿಸುವಂತೆ ಗಂಡನ ಮನೆಯವರಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದ ತಾಯಿಯೊಬ್ಬಳು ತನ್ನ ಕಂದನ ಜತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.

ಗಂಡನ ಮನೆಯಲ್ಲಿ ಮಾನಸಿಕ ಹಾಗೂ ದೈಹಿಕ ಹಿಂಸೆಯಾಗುತ್ತಿದೆ ಎಂದು ಮೂರು ವರ್ಷದ ಕಂದನ ಜತೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮಾ ನಾಗೇಶ ತಳವಾರ ಹಾಗೂ ಮೂರು ವರ್ಷದ ಪುತ್ರ ಭುವನ್‌ ಮೃತರು.

ಗಂಡನ ಮನೆಯವರು ಮಾಡಿದ್ದ ಸಾಲವನ್ನು ತೀರಿಸುವಂತೆ ಪ್ರೇಮಾ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. ಗಂಡ, ಅತ್ತೆ ಸೇರಿದಂತೆ ಕುಟುಂಬದ ಒಟ್ಟು 6 ಸದಸ್ಯರು ಪ್ರೇಮಾ ಅವರಿಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ಪ್ರೇಮಾ ಮಗನೊಂದಿಗೆ ತಾವೂ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಪ್ರೇಮಾ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !