Monday, November 28, 2022

Latest Posts

5.5 ಕೆಜಿ ಚಿನ್ನಾಭರಣ ಪೇಸ್ಟ್ ರೂಪದಲ್ಲಿ ಸಾಗಾಟ: ರೆಡ್ ಹ್ಯಾಂಡ್ ಆಗಿ ಹಿಡಿದ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಂಶಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.5 ಕೆಜಿ ಚಿನ್ನವನ್ನು ಪೇಸ್ಟ್ ಆಗಿ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್‌ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ದುಬೈನಿಂದ ಹೈದರಾಬಾದ್‌ಗೆ ಬಂದಿದ್ದ ಇಬ್ಬರು ಪ್ರಯಾಣಿಕರು ಚಿನ್ನಾಭರಣವನ್ನು ಪೇಸ್ಟ್ ಮಾಡಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರ ಮೇಲೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಬಂಡವಾಳ ಬಯಲಾಗಿದೆ. ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಪರ್ಸ್‌ಗಳಲ್ಲಿ ಇರಿಸಲಾಗಿತ್ತು.

ಅವರ ಪರ್ಸ್ ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಪತ್ತೆಯಾಗಿದೆ. ಈ ಚಿನ್ನದ ಮೌಲ್ಯ ಸುಮಾರು 3 ಕೋಟಿ ರೂ. ಇಬ್ಬರು ದುಬೈ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಏತನ್ಮಧ್ಯೆ, ಶಂಶಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೆಚ್ಚಾಗಿ ಚಿನ್ನದ ಕಳ್ಳಸಾಗಾಣೆ ಹೆಚ್ಚಾಗಿ ನಡೆಯುತ್ತಿದೆ.  ವಿದೇಶದಿಂದ ಅದರಲ್ಲೂ ದುಬೈ ಮುಂತಾದ ದೇಶಗಳಿಂದ ಬರುವವರು ಅಲ್ಲಿಂದ ಚಿನ್ನವನ್ನು ತೆಗೆದುಕೊಂಡು ಬರುತ್ತಾರೆ. ಅಧಿಕಾರಿಗಳು ಅನುಮಾನಾಸ್ಪದವಾಗಿ ಓಡಾಡುವವರ ಮೇಲೆ ಕಣ್ಣಿಟ್ಟಿದ್ದು, ಅಕ್ರಮ ಸಾಗಣೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಳ್ಳಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!