ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆದ್ದಾರಿಗಳಲ್ಲಿ ವೇಗದ ಮಿತಿ ಹಾಕಿದ್ದರೂ ವಾಹನ ಸವಾರರು ಪಾಲಿಸುತ್ತಿಲ್ಲ..ಇದರಿಂದಾಗಿ ಸರಣಿ ಅಪಘಾತಗಳು ನಡೆಯುತ್ತಿವೆ. ಸಂಚಾರಿ ಪೊಲೀಸರಿಗೆ ಇದೊಂದು ದೊಡ್ಡ ತಲೆನೋವಾಗಿದ್ದು, ಇಂದು ಸಂಭವಿಸಿದ ಭೀಕರ ಅಪಘಾತ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.
ಸಮೀರ್ ಪೇಟ್ ಕೀಸರ ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟಕೇಸರ ಕಡೆಯಿಂದ ಮೇಡ್ಚಲ್ ಕಡೆಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿ ಮುಂದೆ ಬರುತ್ತಿದ್ದ ಟಾಟಾ ಎಸಿ ಹಾಗೂ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದಾರೆ.
ಅಪಘಾತದಲ್ಲಿ ಟಾಟಾ ಎಸಿಯಲ್ಲಿದ್ದ ಇಬ್ಬರು ಹಾಗೂ ಲಾರಿ ಚಾಲಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.