ಬಿಜೆಪಿ ಮುಖಂಡನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನಲ್ಲಿ ಬಿಜೆಪಿ ನಾಯಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿಗಳ ಪ್ರಕಾರ ಮೃತಪಟ್ಟವರನ್ನು ಜ್ಞಾನೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಘಟನೆ ಗಮನಿಸಿದ ಕೆಲವರು ತಕ್ಷಣ ಮಿಯಾಪುರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

ಜ್ಞಾನೇಂದ್ರ ಪ್ರಸಾದ್‌ಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆರ್‌ಎಸ್‌ಎಸ್‌ ಸದಸ್ಯನಿಂದ ಬಿಜೆಪಿಯ ರಾಜ್ಯ ಮಟ್ಟದ ನಾಯಕನಾಗಿ ಬೆಳೆದ ಆತನ ನಿಧನಕ್ಕೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ. ಸೋಮವಾರ ಬೆಳಗ್ಗೆ ತಿಂಡಿ ಮಾಡಿದ ಬಳಿಕ ‘ನನ್ನನ್ನು ಬಿಟ್ಟುಬಿಡಿ… ಯಾರೂ ತೊಂದರೆ ಕೊಡಬೇಡಿ’ ಎಂದು ಕುಟುಂಬಸ್ಥರಿಗೆ ಹೇಳಿ ಪೆಂಟ್‌ಹೌಸ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಜ್ಞಾನೇಂದ್ರ ಪ್ರಸಾದ್ ಅವರನ್ನು ಭೇಟಿ ಮಾಡಲು ಬಂದ ಕಾರ್ಯಕರ್ತರು, ಪಿಎ ಸುರೇಶ್ ಎಲ್ಲರೂ ಬಹಳ ಹೊತ್ತು ಕಾದಿದ್ದಾರೆ. ಕಾದು ಕಾದು ಬಾಗಿಲು ಬಡಿದರೂ ಪ್ರತಿಕ್ರಿಯಿಸದಿದ್ದಕ್ಕೆ ಬಾಗಿಲನ್ನು ಹೊಡೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೂರು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಜ್ಞಾನೇಂದ್ರ ಪ್ರಸಾದ್ ಅವರ ಸೊಂಟ ಮುರಿದಿತ್ತು. ಚಿಕಿತ್ಸೆ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರ ಸಾವು ಚರ್ಚೆಗೆ ಗ್ರಾಸವಾಯಿತು. ಆತ್ಮಹತ್ಯೆಗೆ ಮಾನಸಿಕ ಒತ್ತಡ ಕಾರಣವೇ ಅಥವಾ ಇನ್ನೇನಾದರೂ ಕಾರಣವೇ ಎಂಬುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!