Sunday, February 5, 2023

Latest Posts

ಹೈದರಾಬಾದ್‌ನಲ್ಲಿ ಸ್ಫೋಟ: ತಂದೆ-ಮಗನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನ ಲೋವರ್‌ ಟ್ಯಾಂಕ್‌ಬಂಡ್‌ ಬಳಿ ಸ್ಫೋಟ ಸಂಭವಿಸಿದ್ದು, ವೇಸ್ಟ್ ಪೇಪರ್ ಸಂಗ್ರಹಿಸುತ್ತಿದ್ದ ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಪುತ್ರ ಸುರೇಶ್ ಸ್ಥಿತಿ ಗಂಭೀರವಾಗಿದೆ. ಸ್ಫೋಟದಲ್ಲಿ ಗಾಯಗೊಂಡ ತಂದೆ ಮತ್ತು ಮಗ (ಚಂದ್ರಣ್ಣ, ಸುರೇಶ್) ಕರ್ನೂಲ್ ಜಿಲ್ಲೆಯವರು ಎಂದು ಗುರುತಿಸಲಾಗಿದೆ.

ಸ್ಫೋಟದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.  ಘಟನಾ ಸ್ಥಳದಲ್ಲಿ ಪೊಲೀಸರಿಗೆ ಭಾರೀ ಪೈಂಟ್ ಡಬ್ಬಗಳು ಸಿಕ್ಕಿವೆ. ಆ ಡಬ್ಬಗಳು ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ಸದ್ದು ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸ್ಫೋಟದ ಬಗ್ಗೆ ಪೊಲೀಸರು ಪೂರ್ಣ ಪ್ರಮಾಣದ ತನಿಖೆ ನಡೆಸುತ್ತಿದ್ದಾರೆ. ಸ್ಫೋಟ ಸಂಭವಿಸಿದ್ದು ಹೇಗೆ? ಏನು ಕಾರಣ? ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಸ್ಥಳೀಯ ಪೊಲೀಸರು ಸುಳಿವು ತಂಡದೊಂದಿಗೆ ತನಿಖೆ ಕೈಗೊಂಡಿದ್ದಾರೆ. ಇದರಿಂದ ಡಂಪಿಂಗ್ ಯಾರ್ಡ್‌ನಲ್ಲಿ ರಾಸಾಯನಿಕ ತ್ಯಾಜ್ಯವಿದ್ದು, ಅದರಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಅಂದಾಜಿಸಿದ್ದಾರೆ.

ಕಸ ಸಂಗ್ರಹಿಸುವ ವೇಳೆ ಭಾರೀ ಸ್ಫೋಟ ಸಂಭವಿಸಿದ್ದು, ನಂತರ ಏನಾಯಿತು ಎಂಬುದು ಗೊತ್ತಾಗಿಲ್ಲ ಎಂದು ಸಂತ್ರಸ್ತರು ಪೊಲೀಸರಿಗೆ ತಿಳಿಸಿದ್ದಾರೆ. ಇಬ್ಬರಲ್ಲಿ ಒಬ್ಬನ ಕೈ ಸಂಪೂರ್ಣವಾಗಿ ತುಂಡಾಗಿದ್ದು, ಬೆಂಕಿಯಲ್ಲಿ ಮತ್ತೊಬ್ಬರು ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!