ಹೊಸದಿಗಂತ ಡಿಜಿಟಲ್ ಡೆಸ್ಕ್:
2013ರಲ್ಲಿ ನಡೆದಿದ್ದ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದ ಐವರು ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಎತ್ತಿ ಹಿಡಿದಿದೆ.
ಎನ್‌ಐಎ (ವಿಚಾರಣಾ) ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ನಿಷೇಧಿತ ಉಗ್ರ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ(ಐಎಂ) ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು.
2013ರ ಫೆ.21ರಂದು ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿ 2 ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 18 ಮಂದಿ ಮೃತಪಟ್ಟು, 131 ಮಂದಿ ಗಾಯಗೊಂಡಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬಂಧಿಸಿದ್ದ ಎನ್‌ಐಎ, ಅಪರಾಧಿಗಳ ವಿರುದ್ಧ 4000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿತ್ತು.
ಐವರು ಅಪರಾಧಿಗಳನ್ನು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನ ಪ್ರಜೆ ಜಿಯಾ-ಉರ್-ರಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್, ತಹಸೀನ್ ಅಖ್ತರ್ ಅಲಿಯಾಸ್ ಮೋನು ಮತ್ತು ಅಜಾ ಎಂದು ಗುರುತಿಸಲಾಗಿದೆ. 2016ರ ಡಿ.13ರಂದು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.