ಹೈದರಾಬಾದ್‌ ಗ್ಯಾಂಗ್‌ ರೇಪ್|‌ ಆರೋಪಿ ಸಾದುದ್ದೀನ್ ಮಲಿಕ್‌ ಅರೆಸ್ಟ್‌, ಇದರಲ್ಲಿ ಮೂವರು ಬಾಲ ಆರೋಪಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ ವಾರ ಹೈದರಾಬಾದ್‌ನ ಜೂಬ್ಲಿ ಹಿಲ್ಸ್‌ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಪ ಪೊಲೀಸ್ ಆಯುಕ್ತ (ಪಶ್ಚಿಮ ವಲಯ) ಜೋಯಲ್ ಡೇವಿಸ್, ಶಂಕಿತ ಸಾದುದ್ದೀನ್ ಮಲಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿ ಮತ್ತು ಸಂತ್ರಸ್ತೆಯ ಹೇಳಿಕೆಯನ್ನಾಧರಿಸಿ ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಐವರ ಪೈಕಿ ಮೂವರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಒಬ್ಬನ ಹೆಸರನ್ನು ಮಾತ್ರ ಬಹಿರಂಗಪಡಿಸಿದ್ದಾಳೆ. ಉಳಿದಂತೆ ಏನನ್ನೂ ಹೇಳಲು ಆಕೆಯಿಂದ ಸಾಧ್ಯವಾಗಿಲ್ಲ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗಾಗಲೇ ಅಪ್ರಾಪ್ತ ಬಾಲಕನಿರುವ ಸ್ಥಳ ಪತ್ತೆಹಚ್ಚಲಾಗಿದ್ದು, ಕಾನೂನಿನ ಪ್ರಕಾರ ಅಪ್ರಾಪ್ತ ವಯಸ್ಕರನ್ನು ರಾತ್ರಿ ಸಮಯದಲ್ಲಿ ಬಂಧಿಸುವಂತಿಲ್ಲ. ಹಾಗಾಗಿ ಶನಿವಾರ ನಾವು ಅವನನ್ನು ವಶಕ್ಕೆ ಪಡೆಯುತ್ತೇವೆ ಎಂದು ಡಿಸಿಪಿ ಸ್ಪಷ್ಟಪಡಿಸಿದ್ದಾರೆ.

ತೆಲಂಗಾಣ ಗೃಹ ಸಚಿವ ಅವರ ಮೊಮ್ಮಗ ಈ ಘಟನೆಯಲ್ಲಿ ಭಾಗಿಯಾಗಿಲ್ಲ ಎಂದು ಪೊಲೀಸರು ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಎಂಐಎಂ ಶಾಸಕರ ಪುತ್ರನ ಕೈವಾಡದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಮೇ 28 ರಂದು ಹೈದರಾಬಾದ್‌ನ ಜೂಬ್ಲಿ ಹಿಲ್ಸ್ ಪ್ರದೇಶದಲ್ಲಿ ಫ್ರೆಂಡ್ಸ್‌ ಜೊತೆ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಘಟನೆಯ ಕುರಿತು ಅಪ್ರಾಪ್ತ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ನಂತರ ವಿಷಯ ಬೆಳಕಿಗೆ ಬಂದಿದೆ. ಮೆನೆಗೆ ಬಿಡುವುದಾಗಿ ಬಾಲಕಿಯನ್ನು ಪುಸಲಾಯಿಸಿ, ಮರ್ಸಿಡಸ್‌ ಬೆಂಚ್‌ ಕಾರಿನೊಳಗೆ ಬಾಲಕಿಯ ಮೇಲೆ ಹಲ್ಲೆ ನಡೆಸಿ, ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!