2 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದ ಹೈದರಾಬಾದ್‌ ಪೋಲೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಕ್ರಮವಾಗಿ ಸಾಗಿಸುತ್ತಿದ್ದ 2 ಕೋಟಿ ಮೌಲ್ಯದ ಸುಮಾರು 800 ಕೆಜಿ ಗಾಂಜಾವನ್ನು ಹೈದ್ರಾಬಾದ್‌ ಪೋಲೀಸರು ವಶಪಡಿಸಿಕೊಂಡಿದ್ದಾರೆ.

ಹತ್ತಿ ತುಂಬಿಸಿಕೊಂಡು ಬರುತ್ತಿರುವ ಲಾರಿಯೊಂದರಲ್ಲಿ ಗಾಂಜಾ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು 32 ಚೀಲಗಳಲ್ಲಿದ್ದ ಸುಮಾರು 800 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಖುಷಿ ಮೊಹಮದ್‌ ಮತ್ತು ಸೋನು ಸಿಂಗ್‌ ಎಂದು ಗುರುತಿಸಲಾಗಿದ್ದು ಅವರು ಉತ್ತರ ಪ್ರದೇಶದ ಮೂಲದವರು ಎನ್ನಲಾಗಿದೆ.

ಉಳಿದ ಮೂರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗಾಗಿ ಪೋಲೀಸರು ಜಾಲ ಬೀಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!