ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಹೈದರಾಬಾದ್‌ನಲ್ಲಿರುವ ರಸ್ತೆಯೊಂದಕ್ಕೆ ತಮ್ಮ ಹೆಸರನ್ನು ಇಟ್ಟಿರುವುದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ರೀತಿ ಗೌರವ ಪಡೆದ ಮೊದಲ ಅಮೆರಿಕ ಅಧ್ಯಕ್ಷ ನಾನೇ. ನನ್ನ ಹೆಸರನ್ನು ಇಟ್ಟಿದ್ದು ತುಂಬಾ ಖುಷಿಯಾಗಿದೆ ಎಂದಿದ್ದಾರೆ. ದಕ್ಷಿಣ ಭಾರತದ ನಗರದಲ್ಲಿ ಅಮೆರಿಕ ಕಾನ್ಸುಲೇಟ್‌ಗೆ ಹೊಂದಿಕೊಂಡಿರುವ ರಸ್ತೆಗೆ ತೆಲಂಗಾಣ ಸರ್ಕಾರ ʼಡೊನಾಲ್ಡ್ ಟ್ರಂಪ್ ಅವೆನ್ಯೂʼ ಎಂದು ಹೆಸರಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಶುಕ್ರವಾರ ಟ್ರುತ್ ಸೋಶಿಯಲ್ ಮೀಡಿಯಾದಲ್ಲಿ ಟ್ರಂಪ್ ಕೃತಜ್ಞತೆ ಸಲ್ಲಿಕೆ ಮಾಡಿದ್ದಾರೆ.
https://truthsocial.com/@realDonaldTrump/posts/116818236347869022
ಈ ವಾರದ ಆರಂಭದಲ್ಲಿ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಭಾರತಕ್ಕೆ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಅವರು ಈ ಫಲಕವನ್ನು ಅನಾವರಣಗೊಳಿಸುತ್ತಿರುವ ಛಾಯಾಚಿತ್ರವನ್ನು ಹಂಚಿಕೊಂಡಿದ್ದರು.



