ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಹಾಗೂ ಸನ್‌ರೈಸರ‍್ಸ್ ಹೈದರಾಬಾದ್ ಮುಖಾಮುಖಿಯಾಗಲಿದ್ದಾರೆ.
ಈಗಾಗಲೇ ಸನ್‌ರೈಸರ‍್ಸ್ ಟೂರ್ನಿಯಿಂದ ಹೊರಬಿದ್ದಿದೆ. ಆರ್‌ಸಿಬಿ ನಡೆದ 12 ಪಂದ್ಯಗಳಲ್ಲಿ6 ಪಂದ್ಯ ಗೆದ್ದು 12 ಅಂಕ ಪಡೆದಿದೆ.
ಸದ್ಯ ಐದನೇ ಸ್ಥಾನದಲ್ಲಿರುವ ಆರ್‌ಸಿಬಿ ಪ್ಲೇ ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಈ ಪಂದ್ಯ ಗೆಲ್ಲೋದು ಅನಿವಾರ್ಯವಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಇಂದು ಆರ್‌ಸಿಬಿ ಭವಿಷ್ಯ ನಿರ್ಧಾರವಾಗಲಿದೆ.
ರಾಜಸ್ಥಾನ ರಾಯಲ್ಸ್ ವಿರುದ್ಧ ಕಳೆದ ಪಂದ್ಯದಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿದ್ದು, ಅಭಿಮಾನಿಗಳಿಕೆ ನಿರೀಕ್ಷೆ ದುಪ್ಪಟ್ಟಾಗಿದೆ.