ಜೈಲಿನಲ್ಲಿ ಹೈಡ್ರಾಮಾ: ‘ನ್ಯಾಯ’ ಬೇಕು ಎಂದು ಉಪವಾಸ ಕುಳಿತ ಯಾಸಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ತನ್ನ ಪ್ರಕರಣದಲ್ಲಿ ನ್ಯಾಯಯುತ ವಿಚಾರಣೆ ನಡೆಯುತ್ತಿಲ್ಲ ಎಂದು ಆರೋಪಿಸಿ ಜೈಲಿನಲ್ಲಿ ‘ಉಪವಾಸ ಸತ್ಯಾಗ್ರಹ’ ಆರಂಭಿಸಿದ್ದಾನೆ!

ನಿಷೇಧಿತ ಜಮ್ಮು -ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಮುಖ್ಯಸ್ಥನಾಗಿರುವ ಯಾಸಿನ್ ಮಲಿಕ್ ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. 1989ರಲ್ಲಿ ಆಗಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಯ್ಯ ಸಯೀದ್ ಅವರ ಅಪಹರಣ ಮತ್ತು 1990ರಲ್ಲಿ ನಾಲ್ವರು ಭಾರತೀಯ ವಾಯುಪಡೆ (ಐಎಎಫ್) ಅಧಿಕಾರಿಗಳನ್ನು ಕೊಂದ ಪ್ರಕರಣಗಳಲ್ಲಿ ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ವಿಚಾರಣೆ ಎದುರಿಸುತ್ತಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!