May 1, 2026
Friday, May 1, 2026
spot_img

ಪಶ್ಚಿಮ ಬಂಗಾಳದಲ್ಲಿ ಹೈಡ್ರಾಮಾ: 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತದಾನದ ವೇಳೆ ರಾಜ್ಯದ ಡೈಮಂಡ್ ಹಾರ್ಬರ್ ಮತ್ತು ಮಗ್ರಹತ್ ಪಶ್ಚಿಮ್ ಕ್ಷೇತ್ರಗಳಲ್ಲಿ ಅಕ್ರಮ ನಡೆದಿದೆ ಎಂದು ಸತತ ದೂರುಗಳು ಬಂದ ಹಿನ್ನೆಲೆ ಕ್ರಮಕ್ಕೆ ಮುಂದಾದ ಚುನಾವಣಾ ಆಯೋಗವು, 15 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲು ಆದೇಶ ನೀಡಿದೆ.

ಇದರ ಭಾಗವಾಗಿ ನಾಳೆ ಮಗ್ರಹತ್ ಪಶ್ಚಿಮ್‌ನ 11 ಮತಗಟ್ಟೆಗಳಲ್ಲಿ ಮತ್ತು ಡೈಮಂಡ್ ಹಾರ್ಬರ್‌ನ ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ನೀಡಿದೆ.

ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಗೆ ಮತದಾನ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

https://hosadigantha.com/category/national/#google_vignette

ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಈ ಬಾರಿ ಶೇ. 92.47 ರಷ್ಟು ಮತದಾನ ನಡೆದಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !