June 15, 2026
Monday, June 15, 2026
spot_img

ನೀಟ್ ಪ್ರತಿಭಟನೆ ವೇಳೆ ಹೈಡ್ರಾಮಾ: ಜಿರಳೆ ಪಾರ್ಟಿ ಸಂಸ್ಥಾಪಕನಿಗೆ ಕಪಾಳ ಮೋಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೈಪುರದಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ನಡೆದಿರುವ ಘಟನೆ ಸಂಚಲನ ಮೂಡಿಸಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಪ್ರತಿಭಟನೆ ವೇಳೆ ಹೆಚ್ಚಿದ ಉದ್ವಿಗ್ನತೆ

ಮಧ್ಯಾಹ್ನ ಶಹೀದ್ ಸ್ಮಾರಕ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ಅಭಿಜಿತ್ ದಿಪ್ಕೆ ವೇದಿಕೆಯತ್ತ ಸಾಗುತ್ತಿದ್ದ ವೇಳೆ ಕೆಲವರು ಅವರೊಂದಿಗೆ ವಾಗ್ವಾದ ನಡೆಸಿ ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿದರು.

ಬೆಂಬಲಿಗರ ನಡುವೆ ನೂಕಾಟ-ತಳ್ಳಾಟ

ದಿಪ್ಕೆ ಅವರನ್ನು ಬೆಂಬಲಿಗರು ಹೆಗಲ ಮೇಲೆ ಹೊತ್ತುಕೊಂಡು ಸಾಗಿಸುತ್ತಿದ್ದ ವೇಳೆ ಕೆಲವರು ಅವರ ಕುತ್ತಿಗೆಯಲ್ಲಿದ್ದ ಸ್ಕಾರ್ಫ್ ಎಳೆದಿದ್ದಾರೆ ಎನ್ನಲಾಗಿದೆ. ಬಳಿಕ ತಳ್ಳಾಟ-ನೂಕಾಟದ ನಡುವೆ ಕೆಲವರು ಹಲ್ಲೆ ನಡೆಸಿದ ದೃಶ್ಯಗಳು ವೈರಲ್ ಆಗಿವೆ.

ಇದನ್ನೂ ಓದಿ:

ಪೊಲೀಸರ ಮಧ್ಯಪ್ರವೇಶ

ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಹಲ್ಲೆ ನಡೆಸಿದವರ ಗುರುತು ಮತ್ತು ಘಟನೆಯ ಹಿಂದಿನ ಕಾರಣದ ಕುರಿತು ತನಿಖೆ ಮುಂದುವರಿದಿದೆ.

‘ಹಿಂಸೆಯಿಂದ ಹೋರಾಟ ನಿಲ್ಲುವುದಿಲ್ಲ’

ಘಟನೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಅಭಿಜಿತ್ ದಿಪ್ಕೆ, ದೈಹಿಕ ದಾಳಿ ಹೇಡಿತನದ ಸಂಕೇತ ಎಂದು ಹೇಳಿದ್ದಾರೆ. ಶಾಂತಿಯುತ ಮಾರ್ಗದಲ್ಲಿಯೇ ತಮ್ಮ ಹೋರಾಟ ಮುಂದುವರಿಯಲಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಧ್ವನಿ ಎತ್ತುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ಕ್ಷೇತ್ರದ ಅಕ್ರಮಗಳ ವಿರುದ್ಧ ಸಿಜೆಪಿ ದೇಶದ ವಿವಿಧ ನಗರಗಳಲ್ಲಿ ಪ್ರತಿಭಟನೆಗಳನ್ನು ಮುಂದುವರಿಸುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !