ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಮಾರಸ್ವಾಮಿ ಬಳಿ ಮಾತ್ರವಲ್ಲ ನನ್ನ ಹತ್ತಿರನೂ ಪೆನ್‌ಡ್ರೈವ್ (Pendrive) ಇದ್ದು ಬಿಡುಗಡೆಗಾಗಿ ಸಂದರ್ಭಕ್ಕೆ ಕಾಯುತ್ತಿದ್ದೇನೆ ಎಂದು ಶಾಸಕ ಹ ಲಕ್ಷ್ಮಣ ಸವದಿ (Laxman Savadi) ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಲಕ್ಷ್ಮಣ ಸವದಿ, ನನ್ನ ಹತ್ತಿರ ಪೆನ್‌ಡ್ರೈವ್ ಇದ್ದಾವೆ. ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪೆನ್‌ಡ್ರೈವ್ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.
ಹೆಚ್‌ಡಿಕೆ ಮಾತನ್ನು ನೋಡಿದ್ದೇನೆ. ತುಂಬಾ ಜನರ ಕಡೆ ಪೆನ್‌ಡ್ರೈವ್ ಇದ್ದಾವೆ. ನನ್ನ ಹತ್ತಿರ ಒಂದು ಪೆನ್‌ಡ್ರೈವ್ ಇದೆ, ಕಾಲಾನುಸಾರ ಬಿಡುಗಡೆ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ವಿರೋಧ ಪಕ್ಷ ಇದೆಯೆಂದು ತೋರಿಸಲು ಆ ರೀತಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.