ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ. ಈಗಲೂ ಭರವಸೆ ಇದೆ, ನಾಳೆಯೂ ಇರಲಿದೆ. ಎಂದಾದರೂ ಒಂದು ದಿನ ಡಿಕೆಶಿ ಶ್ರಮಕ್ಕೆ ಫಲ ಸಿಗುತ್ತೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಎಂದಾದರೂ ಒಂದು ದಿನ ಡಿ.ಕೆ ಶಿವಕುಮಾರ್ ಶ್ರಮಕ್ಕೆ ಫಲ ಸಿಗುತ್ತೆ. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದ್ದಾರೆ.