ನನಗೂ ಆಸೆಯಿದೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು: ಅಜಿತ್ ಪವಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎನ್ಸಿಪಿಯಿಂದ ಬಂಡಾಯವೆದ್ದು ಮಹಾರಾಷ್ಟ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾದ ಅಜಿತ್ ಪವಾರ್ ತಮ್ಮ ಬೆಂಬಲಿಗರ ಸಭೆಯಲ್ಲಿ ಮಹತ್ವದ ವಿಚಾರಗಳನ್ನು ಹೇಳಿದ್ದಾರೆ.

ಜನರ ಕಲ್ಯಾಣಕ್ಕಾಗಿ ಕೆಲವು ಯೋಜನೆಗಳನ್ನು ಜಾರಿಗೆ ತರಲು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲು ಬಯಸುತ್ತೇನೆ ಅಜಿತ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

2004ರ ವಿಧಾನಸಭಾ ಚುನಾವಣೆಯಲ್ಲಿ ಎನ್ಸಿಪಿ ಕಾಂಗ್ರೆಸ್ಗಿಂತ ಹೆಚ್ಚು ಸ್ಥಾನಗಳನ್ನು ಪಡೆದಿತ್ತು. ಆ ಸಮಯದಲ್ಲಿ ನಾವು ಕಾಂಗ್ರೆಸ್ಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ, ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ ಎನ್ ಸಿಪಿಯವರೇ ಮುಖ್ಯಮಂತ್ರಿಯಾಗಿ ಇರುತ್ತಿದ್ದರು ಎಂದರು.

2017ರಲ್ಲೂ ವರ್ಷಾ ಬಂಗಲೆಯಲ್ಲಿ ಸಭೆ ನಡೆಸಿದ್ದೆವು. ಪಕ್ಷದ ಹಿರಿಯ ನಾಯಕರಾದ ಛಗನ್ ಭುಜಬಲ್, ಜಯಂತ್ ಪಟೇಲ್, ನಾನು ಮತ್ತು ಇನ್ನೂ ಹಲವರು ಅಲ್ಲಿಗೆ ಹೋಗಿದ್ದೆವು.

ಬಿಜೆಪಿಯ ಹಲವಾರು ನಾಯಕರು ಸಹ ಅಲ್ಲಿದ್ದರು. ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ಬಗ್ಗೆಯೂ ಚರ್ಚೆ ಆಗಿತ್ತು. ಆದರೆ ನಂತರ ನಮ್ಮ ಪಕ್ಷ ಒಂದು ಹೆಜ್ಜೆ ಹಿಂದಕ್ಕೆ ಸರಿಯಿತು ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಈ ವೇಳೆ 83 ವರ್ಷದ ಶರದ್ ಪವಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಜಿತ್ ಪವಾರ್ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟ ನಾಯಕರು ನಿವೃತ್ತರಾಗುತ್ತಾರೆ.ಆದರೆ ನಿಮಗೆ 83 ವರ್ಷ. ನೀವು ಯಾವಾಗ ನಿವೃತ್ತಿಯಾಗುತ್ತೀರಿ? ಎಂದು ಪ್ರಶ್ನಿಸಿದರು.
ಐಎಎಸ್ ಅಧಿಕಾರಿಗಳು 60ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ, ರಾಜಕೀಯದಲ್ಲಿಯೂ – ಬಿಜೆಪಿ ನಾಯಕರು 75 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ. ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರ ಉದಾಹರಣೆಯನ್ನು ನೀವು ನೋಡಬಹುದು. ಅದು ಹೊಸ ಪೀಳಿಗೆಗೆ ಅನುವು ಮಾಡಿಕೊಡುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!