March 28, 2026
Saturday, March 28, 2026
spot_img

ಕಾನೂನಿಗೆ ನಾನೆಂದೂ ಬದ್ಧ: ವಿಚಾರಣೆ ಬಳಿಕ ಮಲ್ಲಿಕಾರ್ಜುನ ಮುತ್ಯಾ ನೀಡಿದ ಸ್ಪಷ್ಟನೆ ಏನು?

ಹೊಸದಿಗಂತ ಯಾದಗಿರಿ:

ಪೋಕ್ಸೋ (POCSO) ಕಾಯಿದೆಯಡಿ ದಾಖಲಾಗಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ಶಹಾಪುರದ ಮಲ್ಲಿಕಾರ್ಜುನ ಮುತ್ಯಾ ಅವರು ಇಂದು ಪೊಲೀಸ್ ವಿಚಾರಣೆಗೆ ಹಾಜರಾದರು. ಶಹಾಪುರ ಪಟ್ಟಣದ ಸಿಪಿಐ ಕಚೇರಿಯಲ್ಲಿ ನಡೆದ ಈ ವಿಚಾರಣೆಯು ಬರೋಬ್ಬರಿ ಆರು ಗಂಟೆಗಳ ಕಾಲ ಸುದೀರ್ಘವಾಗಿ ನಡೆಯಿತು.

ವಿಚಾರಣೆ ಮುಗಿಸಿ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಮುತ್ಯಾ, ಈ ಕೆಳಗಿನ ಅಂಶಗಳನ್ನು ಹಂಚಿಕೊಂಡರು:

“ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಬಗ್ಗೆ ಪೊಲೀಸರು ಕೇಳಿದ ಪ್ರತಿಯೊಂದು ಪ್ರಶ್ನೆಗೂ ನಾನು ಪ್ರಾಮಾಣಿಕವಾಗಿ ಉತ್ತರಿಸಿದ್ದೇನೆ. ತನಿಖೆಗೆ ಪೂರ್ಣ ಸಹಕಾರ ನೀಡುತ್ತಿದ್ದೇನೆ,” ಎಂದರು.

“ಮಠದ ಜಾತ್ರೆಯ ನಿಮಿತ್ತ ನಾನು ಹೊರಗಡೆ ಹೋಗಿದ್ದೆ. ಆ ಸಂದರ್ಭದಲ್ಲಿ ನನ್ನ ಆರೋಗ್ಯದಲ್ಲಿ ಏರುಪೇರಾದ ಕಾರಣ ವಿಚಾರಣೆಗೆ ತಕ್ಷಣ ಹಾಜರಾಗಲು ಸಾಧ್ಯವಾಗಲಿಲ್ಲ,” ಎಂದು ಹಾಜರಾತಿ ವಿಳಂಬಕ್ಕೆ ಸ್ಪಷ್ಟನೆ ನೀಡಿದರು.

“ನಾನು ಯಾವತ್ತೂ ಕಾನೂನಿಗೆ ತಲೆಬಾಗುವ ವ್ಯಕ್ತಿ. ನ್ಯಾಯಾಂಗ ಪ್ರಕ್ರಿಯೆಯ ಮೇಲೆ ನನಗೆ ನಂಬಿಕೆಯಿದೆ,” ಎಂದು ಅವರು ತಿಳಿಸಿದರು.

ಸದ್ಯ ಪೊಲೀಸರು ಮುತ್ಯಾ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !