ದಕ್ಷಿಣ ಕ್ಷೇತ್ರದ ಶಿಕ್ಷಕರ ಚುನಾವಣಾ ಸ್ಪರ್ಧೆಗೆ ನಾನೂ ಆಕಾಂಕ್ಷಿ: ಡಾ. ಚೇತನ್ ಕುಮಾರ್

ಹೊಸದಿಗಂತ ವರದಿ ಹಾಸನ:

ಮುಂಬರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು‌ ಕೂಡ ಪ್ರಭಲ ಅಕಾಂಕ್ಷಿ ಎಂದು ಜಿಲ್ಲಾ ಬಿಜೆಪಿ ಮುಖಂಡ ಡಾ.ಚೇತನ್ ಕುಮಾರ್ ಕೆ.ಟಿ ತಿಳಿಸಿದರು.

ನಗರದಲ್ಲಿ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಜೂನ್ 2024 ರಲ್ಲಿ ನಡೆಯಲಿರುವ ದಕ್ಷಿಣ ಶಿಕ್ಷಣ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಪ್ರಭಲ ಆಕಾಂಕ್ಷಿಯಾಗಿದ್ದೆನೆ. ಇದೇ ಹಾಸನ ಜಿಲ್ಲೆಯವನಾದ ನಾನು ಬಿಜೆಪಿ ಪಕ್ಷದಲ್ಲಿ ಅನೇಕ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಹಾಗೂ ಪ್ರಮಾಣಿಕವಾಗಿ ನಿರ್ವಹಿಸಿಕೊಂಡು ಬಂದಿದ್ದೇನೆ, ಅಲ್ಲದೆ ತನ್ನದೇ ಅದ ಶಿಕ್ಷಣ ಸಂಸ್ಥೆಯನ್ನು ನಡೆಸಿಕೊಂಡು ಬಂದಿದ್ದೇನೆ.‌ ಅರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣ್ಣೆ ಸಹಾಯಕೂಡ ಮಾಡಿದ್ದೇನೆ. ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದೇನೆ. ಶಿಕ್ಷಕರ ಮತ್ತು ಮಕ್ಕಳ ಭವಿಷ್ಯ ಹಾಗೂ ಅವರಿಗೆ ಬೇಕಾದ ಸವಲತ್ತು ನೀಡಿ ಶಿಕ್ಷಣ ಕ್ಷೇತ್ರಕ್ಕೆ ನನ್ನಿಂದಾಗುವ ಪ್ರಮಾಣಿಕ ಸೇವೆಯನ್ನು ಮಾಡಬೇಕು ಎಂದುಕೊಂಡಿದೇನೆ. ಆದ್ದರಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಾನೂ ಸಹ ಒಬ್ಬ ಪ್ರಭಲ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದರು.

ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ನಾನು ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಪಿಎಚ್ ಡಿ ಪದವಿಯನ್ನು ಪಡೆದಿದ್ದೇನೆ. ಹಾಗೂ ಈ ಕ್ಷೇತ್ರದಲ್ಲಿಯೇ ಶಿಕ್ಷಣ ಸಂಸ್ಥೆಯನ್ನು ಹೊಂದಿರುವ ನನಗೆ ಇಲ್ಲಿಯ ಸಮಸ್ಯೆಗಳ ಬಗ್ಗೆ ಹಾಗೂ ಆಗುಹೋಗುವುಗಳ ಒಂದಿಷ್ಟು ಅರಿವನ್ನು ಹೊಂದಿದ್ದೇನೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಭಾಗದ ಪ್ರಜ್ಞಾವಂತ ಮತದಾರರು ತನಗೆ ಮತ ನೀಡುವ ಮೂಲಕ ಶಿಕ್ಷಣ ಕ್ಷೇತ್ರದ ಬದಲಾವಣೆ ತರಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!