ಹಿಂದೂಗಳ ಕುರಿತಾದ ಹೇಳಿಕೆಗೆ ಕ್ಷಮೆಯಾಚಿಸಿದ ಅಸ್ಸಾಂ ಸಂಸದ ಬದ್ರುದ್ದೀನ್ ಅಜ್ಮಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹಿಂದೂಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಹಿಂದೂಗಳ ಕ್ಷಮೆಯಾಚನೆ ಮಾಡಿದ್ದಾರೆ. ಯಾರ ಭಾವನೆಗಳನ್ನು ನೋಯಿಸುವ ಉದ್ದೇಶ ನನಗಿಲ್ಲ ಎಂದು ಅವರು ಹೇಳಿದ್ದಾರೆ.
ಅಜ್ಮಲ್ ಅವರು ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಲು ಮುಸ್ಲಿಮರಂತೆ ಚಿಕ್ಕ ವಯಸ್ಸಿನಲ್ಲಿಯೇ ಮದುವೆಯಾಗಬೇಕು ಎಂದು ಹೇಳಿದ್ದರು. “ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನಗಿರಲಿಲ್ಲ. ನನ್ನ ಹೇಳಿಕೆಗೆ ತೀವ್ರ ವಿಷಾದವಿದೆ. ಹಿರಿಯ ನಾಯಕನಾಗಿದ್ದ ನಾನು ಇಂತಹ ಹೇಳಿಕೆಗಳನ್ನು ನೀಡಬಾರದಿತ್ತು. ನನ್ನ ಹೇಳಿಕೆಯಿಂದ ನೋಯುತ್ತಿರುವ ಎಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ನನ್ನ ಹೇಳಿಕೆಗಳಿಗೆ ನಾಚಿಕೆಯಾಗುತ್ತಿದೆ. ನಾವು  ಜನಸಂಖ್ಯೆ ನಿಯಂತ್ರಣದ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದರು.
ಮುಸ್ಲಿಂ ಪುರುಷರು 20-22 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು 18 ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ, ಆದರೆ, (ಹಿಂದೂಗಳು) ಮದುವೆಗೆ ಮೊದಲು ಒಬ್ಬ ಎರಡು ಅಥವಾ ಮೂರು ಅಕ್ರಮ ಹೆಂಡತಿಯರನ್ನು ಹೊಂದಿದ್ದಾರೆ. ನಿಧಾನವಾಗಿ ಮದುವೆಯಾಗುವುದರಿಂದ ಅವರು ಕಡಿಮೆ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ” ಎಂದು ಎಐಯುಡಿಎಫ್ ಮುಖ್ಯಸ್ಥರು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!