ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ. ನನಗೇಕೆ ಭಯವಾಗಬೇಕು? ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಜಾರಿ ನಿರ್ದೇಶನಾಯಲಯದವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣ ವಹಿಸುವ ಸಂಬಂಧ ನ್ಯಾಯಾಲಯದಲ್ಲಿ ವಾದ ನಡೆಯುತ್ತಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ ಅಲ್ಲ, ಇಡೀ ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ತಿಳಿಸಿದರು.