ಮುಖ್ಯಮಂತ್ರಿ ಸ್ಥಾನಕ್ಕೆ ನನಗಿದೆ ಅರ್ಹತೆ…ಆದರೆ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ ಎಂದಿದ್ದಾರೆ.

ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!