ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಹೀನಾಯ ಸೋಲು ಕಂಡಿದೆ. ಈ ಕುರಿತು ಮಾತನಾಡಿರುವ ನಾಯಕ ರೋಹಿತ್ ಶರ್ಮಾ ,ಸೋಲಿನ ಸಂಪೂರ್ಣ ಹೊಣೆಯನ್ನು ತಾನೆ ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ.
ಕಿವೀಸ್ ವಿರುದ್ಧ ಸೋಲಿನ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಈ ಸರಣಿಯ ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ. ಏಕೆಂದರೆ ನಾನು ಉತ್ತಮವಾಗಿ ಬ್ಯಾಟ್ ಮಾಡಲಿಲ್ಲ, ಕೆಟ್ಟದಾಗಿ ಬ್ಯಾಟಿಂಗ್ ಮಾಡಿದೆ. ಬ್ಯಾಟರ್ ಮತ್ತು ನಾಯಕನಾಗಿ ನಾನು ನನ್ನ ಅತ್ಯುತ್ತಮ ಸ್ಥಿತಿಯಲ್ಲಿರಲಿಲ್ಲ. ನಾಯಕನಾಗಿ ತಂಡವನ್ನು ಮುನ್ನಡೆಸದ ಕಾರಣ ನಮ್ಮ ತಂಡ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ನ್ಯೂಜಿಲೆಂಡ್ ನಮಗಿಂತ ಉತ್ತಮ ಆಟ ಆಡಿದರು. ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಒಳ್ಳೆಯ ಹಿಡಿತ ಸಾಧಿಸಿದರು. ಇದು ನಮಗೆ ಕಠಿಣ ಸವಾಲು ಆಗಿತ್ತು. ನಾನು ಈ ಸರಣಿಯಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡದೇ ಇರಬಹುದು. ಆದ್ರೆ ನನ್ನ ರಕ್ಷಣಾತ್ಮಕ ಆಟವನ್ನು ಕಳೆದುಕೊಂಡಿಲ್ಲ ಎಂದು ಹೇಳಿದರು.