ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್ ದೆಹಲಿಗೆ ಬರುವಂತೆ ಆಹ್ವಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಗೆ ಬರುವಂತೆ ಹೇಳಿದ್ದಾರೆ, ಸರ್ಕಾರ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಈ ಹಿಂದೆ ಶಾಸಕರನ್ನು ನೇಮಿಸಲು ಯೋಚಿಸಿದ್ದೆವು, ಆದರೆ ಪಕ್ಷದ ಕಾರ್ಯಕರ್ತರನ್ನೂ ಆಯ್ಕೆ ಮಾಡಲು ಬೇಡಿಕೆ ಇದೆ ಹೀಗಾಗಿ ಬೇರೆ ಪಟ್ಟಿ ತಯಾರಿ ನಡೆಯುತ್ತಿದೆ. ಈ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ತೆರಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.