ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆಂತಕ ಪಡಬೇಡಿ ಎಂಬುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ದಾಖಲಾಗಿರೋದಾಗಿ ತಿಳಿದು ಬಂದಿತ್ತು. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಅವರು ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯನ್ನು ಗಮನಿಸಿದ್ದೇನೆ. ಆ ತರದ ಯಾವುದೇ ಅನಾರೋಗ್ಯಕ್ಕೆ ನಾನು ಒಳಗಾಗಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ನಿಗದಿಯಂತೆ ರೊಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ. ನಾನು ಶೀಘ್ರದಲ್ಲೇ ಮನಗೆ ಹಿಂದಿರುಗುತ್ತೇನೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.