ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಕತ್ತಾ ಟ್ರೈನಿ ವೈದ್ಯೆಯ ಮರ್ಡರ್ ಕೇಸ್‌ಗೆ ಸಂಬಂಧಿಸಿದಂತೆ
ನಾನೇ ಅತ್ಯಾಚಾರ ಹಾಗೂ ಕೊಲೆ ಮಾಡಿದ್ದು ಎಂದು ಒಪ್ಪಿಕೊಂಡಿದ್ದ ಆರೋಪಿ ಸಂಜಯ ರಾಯ್ ಇದೀಗ ಉಲ್ಟಾ ಹೊಡೆದಿದ್ದಾನೆ. ನಾನು ಕೊಲೆ ಮಾಡೇ ಇಲ್ಲ ಎಂದು ಹೇಳಿದ್ದಾನೆ.
ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಹಾಲ್‌ಗೆ ಬಂದಾಗ ಮಹಿಳಾ ವೈದ್ಯೆ ಆಗಲೇ ಮೃತಪಟ್ಟಿದ್ದಳು ಎಂದು ಆರೋಪಿ ಸಂಜಯ್ ರಾಯ್ ಪಾಲಿಗ್ರಾಪ್ ಪರೀಕ್ಷೆ ವೇಳೆ ಹೇಳಿಕೆ ನೀಡಿದ್ದಾರೆ. ಆತನ ಮಾನಸಿಕ ಸ್ಥಿತಿ ಬಗ್ಗೆ ಅನುಮಾನ ಹುಟ್ಟಿದೆ. ಅಂದು ನಾನು ಸೆಮಿನಾರ್ ಹಾಲ್‌ಗೆ ಹೋಗುವ ಮೊದಲು ಆಕೆ ಸಾವನ್ನಪ್ಪಿದ್ದಳು, ನಾನು ನಿರಪರಾಧಿ ಎಂದು ಆತ ಹೇಳಿದ್ದಾನೆ.
ಕೋಲ್ಕತ್ತಾದ ಪ್ರೆಸಿಡೆನ್ಸಿ ಜೈಲಿನಲ್ಲಿ ಸಿಬಿಐ ಅಧಿಕಾರಿಗಳು ಆರೋಪಿ ಸಂಜಯ್ ರಾಯ್ ಅವರ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಿದ್ದರು. ಟೈಮ್ಸ್ ಆಫ್ ಇಂಡಿಯಾ ನೀಡಿರುವ ವರದಿ ಪ್ರಕಾರ, ಸುಳ್ಳು ಪತ್ತೆ ಪರೀಕ್ಷೆ ವೇಳೆ ಸುಳ್ಳು ಹಾಗೂ ಅನುಮಾನಾಸ್ಪದ ಉತ್ತರಗಳನ್ನು ಗುರುತಿಸಲಾಗಿದೆ. ಸಂಜಯ್ ರಾಯ್ ಆ ವೇಳೆ ಆತಂಕಗೊಂಡಿದ್ದ, ಸಿಬಿಐ ಹಲವು ಸಾಕ್ಷ್ಯಗಳನ್ನು ಮುಂದಿಟ್ಟರೂ ಆತ ಸಮರ್ಥನೆ ನೀಡುತ್ತಲೇ ಇದ್ದ ಎಂಬುದು ತಿಳಿದುಬಂದಿದೆ.