ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತ ಮತ್ತು ಇಸ್ರೇಲ್ ನಡುವೆ ವಿಶಿಷ್ಟ ಮತ್ತು ಆತ್ಮೀಯವಾದ ಸಂಬಂಧಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೇರಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಇಸ್ರೇಲ್ನ ನೂತನ ಪ್ರಧಾನಿ ನಫ್ತಾಲಿ ಬೆನೆಟ್ ಸೋಮವಾರ ಟ್ವೀಟ್ ಮಾಡಿದ್ದಾರೆ.
ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಫ್ತಾಲಿ ಬೆನೆಟ್ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸುತ್ತಾ ಬೆನೆಟ್ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
‘ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಎರಡು ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ವಿಶಿಷ್ಟ ಮತ್ತು ಆತ್ಮೀಯ ಸಂಬಂಧಗಳನ್ನು ಅಭಿವೃದ್ಧಿಪಡಿಸಲು, ನಿಮ್ಮೊಂದಿಗೆ ಕೆಲಸ ಮಾಡಲು ಉತ್ಸಕನಾಗಿದ್ದೇನೆ’ ಎಂದು ಹೇಳಿದ್ದಾರೆ.
ಇಸ್ರೇಲ್ನ ಹೊಸ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಬೆನೆಟ್ ಅವರನ್ನು ಅಭಿನಂದಿಸಿದ ಮೋದಿ ಅವರು, ‘ಮುಂದಿನ ವರ್ಷ ಎರಡು ದೇಶಗಳ ರಾಜತಾಂತ್ರಿಕ ಸಂಬಂಧಗಳ ಉನ್ನತೀಕರಣದ 30ನೇ ವರ್ಷಾಚರಣೆ ವೇಳೆ ನಾವು ಭೇಟಿಯಾಗೋಣ. ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲವಾಗಿಸಲು ನಾನು ಎದುರು ನೋಡುತ್ತಿದ್ದೇನೆ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ
Thank you Mr. Prime Minister @narendramodi, I look forward to working with you to further develop the unique and warm relations between our two democracies. 🇮🇱🇮🇳 https://t.co/TbwhJuPz9u
— PM of Israel (@IsraeliPM) June 14, 2021