ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಎಂಬ ಹಾಡಿನ ಹಾಸ್ಯಮಯ ವಿಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿದ್ದ ವಿಡಿಯೋ ಕ್ರಿಯೇಟರ್ ವಿಕ್ಕಿಪೀಡಿಯಾ ವಿಕಾಸ್ ಎಂಬಾತನಿಗೆ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ವಿಕಾಸ್‌ನನ್ನು ಬೈಯಪ್ಪನಹಳ್ಳಿ ಪೊಲೀಸರು ಫೋನ್ ಮೂಲಕ ಸಂಪರ್ಕಿಸಿದ್ದಾರೆ.
ಡ್ರಗ್ಸ್ ಬಗೆಗಿನ ಪ್ರಚೋದನಾತ್ಮಕ ಹೇಳಿಕೆಯ ವೀಡಿಯೋ ಕೂಡಲೇ ಡಿಲೀಟ್ ಮಾಡಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.